ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಗೆ ಜೆಡಿಎಸ್ ಬಾಗಿಲು ಬಂದ್‌! ಜಿಟಿಡಿ ಹೆಸರು ಅನ್ನು ಎತ್ತಬೇಡಿ ಎಂದ ಕುಮಾರಸ್ವಾಮಿ

Feb 12, 2026 - 09:44
 0  0
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಗೆ ಜೆಡಿಎಸ್ ಬಾಗಿಲು ಬಂದ್‌! ಜಿಟಿಡಿ ಹೆಸರು ಅನ್ನು ಎತ್ತಬೇಡಿ ಎಂದ ಕುಮಾರಸ್ವಾಮಿ


ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದೊಂದಿಗೆ ಇಲ್ಲ. ಪಕ್ಷದಿಂದ ದೂರ ಉಳಿದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ನಮ್ಮೊಂದಿಗೆ ಇದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಹಲವಾರು ನಾಯಕರು ಇದ್ದಾರೆ. ದೊಡ್ಡ ಮಟ್ಟದಲ್ಲಿ ತಯಾರಿ ಮಾಡಿಕೊಂಡಿರುವವರು ಇದ್ದಾರೆ. ದೊಡ್ಡ ಮಟ್ಟದ ಅಭ್ಯರ್ಥಿಯನ್ನೇ ಮುಂದಿನ ಚುನಾವಣೆಗೆ ಕಣಕ್ಕಿಳಿಸುತ್ತೇವೆ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡಗೆ ಜೆಡಿಎಸ್ ಪಕ್ಷದ ಬಾಗಿಲು  ಬಂದ್ ಆಗಿದೆ ಎಂಬ ಖಡಕ್ ಸಂದೇಶ ರವಾನಿಸಿದ್ದಾರೆ. 
ಜೊತೆಗೆ ಜಿ.ಟಿ.ದೇವೇಗೌಡ ಹೆಸರು ಅನ್ನು ಕೂಡ ನಮ್ಮ ಎದುರು ಪ್ರಸ್ತಾಪ ಮಾಡಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
ಸಿದ್ದರಾಮಯ್ಯ ಎದುರುಗಡೆ ಸಿದ್ದರಾಮಯ್ಯರನ್ನು ಈ ಹಿಂದೆ ಜಿ.ಟಿ.ದೇವೇಗೌಡ ಹೊಗಳಿದ್ದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೇ, ಎಲ್ಲರೂ ರಾಜೀನಾಮೆ ನೀಡಬೇಕಾಗುತ್ತೆ. ಎಲ್ಲರೂ ರಾಜೀನಾಮೆ ಕೊಡ್ತಾರಾ ಎಂದು ಜಿ.ಟಿ.ದೇವೇಗೌಡ ಪ್ರಶ್ನಿಸಿದ್ದರು. ಇದು ಎಚ್‌.ಡಿ.ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. 
ಆದರೇ, ಜಿಟಿಡಿ ಅವರ ಪುತ್ರ ಜಿ.ಡಿ.ಹರೀಶ್ ಗೌಡ ಮಾತ್ರ ಜೆಡಿಎಸ್ ಪಕ್ಷ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆಗೆ ಇದ್ದಾರೆ. ಇತ್ತೀಚೆಗೆ ಹರೀಶ್ ಗೌಡರ ಹುಟ್ಟುಹಬ್ಬದ ಪ್ಲೆಕ್ಸ್ ಮತ್ತು ಬ್ಯಾನರ್ ಗಳಲ್ಲೂ ಜಿಟಿ ದೇವೇಗೌಡರ ಪೋಟೋ ಇರಲಿಲ್ಲ. 

‘ಸುಲಿಗೆ ಸುಪುತ್ರನಿಂದ ಕಾಸಿಗಾಗಿ ಹುದ್ದೆ ವ್ಯವಹಾರ’- ಯತೀಂದ್ರ ಸಿದ್ದರಾಮಯ್ಯ ವೈರಲ್ ವಿಡಿಯೋಗೆ HDK ಕಿಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0