ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ಪಿ.ರಾಮಯ್ಯ ವಿಧಿವಶ: ಸಿಎಂ, ಎಚ್‌ಡಿಕೆಯಿಂದ ಸಂತಾಪ

Feb 12, 2026 - 09:44
 0  0
ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ಪಿ.ರಾಮಯ್ಯ ವಿಧಿವಶ: ಸಿಎಂ, ಎಚ್‌ಡಿಕೆಯಿಂದ ಸಂತಾಪ

ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಪಿ.ರಾಮಯ್ಯ ಅವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿ ಪಿ.ರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದರು. ವಿವಿಧ ಅಂಗಾಂಗ ವೈಫಲ್ಯದಿಂದ ಮಂಗಳವಾರ ರಾತ್ರಿ ಪಿ.ರಾಮಯ್ಯ ನಿಧನರಾಗಿದ್ದಾರೆ ಎಂದು ಅವರ ಪುತ್ರ ಡಾ.ಬಾಲಾಜಿ ಮಾಹಿತಿ ನೀಡಿದ್ದಾರೆ. 
ದಿ ಹಿಂದೂ ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಹಿಂದೂ ರಾಮಯ್ಯ ಎಂದೇ ಪಿ.ರಾಮಯ್ಯ ಅವರು ಹೆಸರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನ ನೀಡಿ ಪಿ.ರಾಮಯ್ಯ ಅವರ ಸೇವೆ, ಸಾಧನೆಗೆ ಗೌರವ ಸಲ್ಲಿಸಲಾಗಿತ್ತು. ಸಣ್ಣ ಪತ್ರಿಕೆಗಳ ಸಮಸ್ಯೆಯ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದರು.  ಬೆಂಗಳೂರಿನ ಸದಾಶಿವನಗರದ ಕ್ಲಬ್‌ ಸಮೀಪ ಇರುವ ಮನೆಯಲ್ಲಿ ಪಿ.ರಾಮಯ್ಯ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿದೆ. 
ಇಂದು ಸಿಎಂ ಸಿದ್ದರಾಮಯ್ಯ ಅವರು ಪಿ.ರಾಮಯ್ಯ ಅವರ ಮನೆಗೆ ಭೇಟಿ ನೀಡಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಪಿ.ರಾಮಯ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

HINDU RAMAIAH IS NO MORE (3)




ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಟ್ವೀಟರ್ ನಲ್ಲಿ ಪಿ.ರಾಮಯ್ಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನನ್ನ ಬಗ್ಗೆ ಮಮತೆಯನ್ನು ಹೊಂದಿದ್ದರು ಎಂದು ಕುಮಾರಸ್ವಾಮಿ ಅವರು ಪಿ.ರಾಮಯ್ಯ ಅವರನ್ನು ಸ್ಮರಿಸಿಕೊಂಡಿದ್ದಾರೆ. 

HINDU RAMAIAH IS NO MORE (4)



ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0